GESCOM Apprentice Recruitment 2024 : ಗುಲಬರ್ಗಾ ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತದಲ್ಲಿ ಅಗತ್ಯವಿರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
GESCOM Apprentice Recruitment 2024 : Details of Vacancies
ಹುದ್ದೆ : ಶಿಶಿಕ್ಷು (ಅಪ್ರೆಂಟಿಸ್)
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕಲಬುರಗಿ, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 221 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಶೈಕ್ಷಣಿಕ ಅರ್ಹತೆ : ಎಸ್.ಎಸ್.ಎಲ್.ಸಿ ನಂತರ ಎರಡು ವರ್ಷ ಅವಧಿಯ ಐ.ಟಿ.ಐ. ತರಬೇತಿ ಹೊಂದಿ, ಕುಶಲಕರ್ಮಿ ತರಬೇತಿ ಯೋಜನೆಯಡಿ ನಡೆಸುವ ವೃತ್ತಿ ಪರೀಕ್ಷೆಯ ಎಲೆಕ್ಟ್ರೀಷಿಯನ್ ವೃತ್ತಿಯಲ್ಲಿ ತೇರ್ಗಡೆಯಾಗಿ, ರಾಷ್ಟ್ರೀಯ ವೃತ್ತಿ ಪ್ರಮಾಣ ಪತ್ರ (NCVT) ರಾಜ್ಯ ವೃತ್ತಿ ಪ್ರಮಾಣ ಪತ್ರ (SCVT) ಅಂಕಪಟ್ಟಿ ಹೊಂದಿರುವ ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ.
ಉದ್ಯೋಗ ಮಾಹಿತಿ : ಎಸ್‌ಎಸ್‌ಸಿ ಕಾನ್ಸ್‌ಟೇಬಲ್ (ಜಿಡಿ) ಬೃಹತ್ ನೇಮಕಾತಿ 2024
ವಯೋಮಾನ : ದಿನಾಂಕ 23-08-2024ಕ್ಕೆ ಕನಿಷ್ಠ 16 ವರ್ಷ ಪೂರೈಸಿರಬೇಕು ಹಾಗೂ ದಿನಾಂಕ 13-09-2024ಕ್ಕೆ
• ಸಾಮಾನ್ಯ ವರ್ಗ, ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ – ಗರಿಷ್ಠ 25 ವರ್ಷ
• ಪ.ಜಾತಿ/ ಪ.ಪಂಗಡದ ಅಭ್ಯರ್ಥಿಗಳಿಗೆ – ಗರಿಷ್ಠ 30 ವರ್ಷ
ಶಿಶಿಕ್ಷು ವೇತನ : ಅಭ್ಯರ್ಥಿಗಳಿಗೆ ಮಾಸಿಕ ರೂ. 5,500 ಶಿಶಿಕ್ಷು ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ : ಐಟಿಐ/ ಐಟಿಐ (ಎಲೆಕ್ಟ್ರೀಷಿಯನ್ ವೃತ್ತಿ) ಯಲ್ಲಿ ಗರಿಷ್ಠ ಅಂಕಗಳ ಆಧಾರದ ಮೇಲೆ ಮೀಸಲಾತಿ ರೋಸ್ಟರ್ ಪ್ರಕಾರ ಆಯ್ಕೆ ಮಾಡಲಾಗುವುದು.
ಉದ್ಯೋಗ ಮಾಹಿತಿ : RRB Recruitment: ರೈಲ್ವೆ ಇಲಾಖೆಯಲ್ಲಿ 11,558 ಹುದ್ದೆಗಳಿಗೆ ಅರ್ಜಿ ಆಹ್ವಾನ.! 12ನೇ ತರಗತಿ ಪಾಸಾಗಿದ್ದರೆ ಸಾಕು!
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ) ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ನೇರವಾಗಿ ಅಥವಾ ಅಂಚೆಯ ಮೂಲಕ ಕಳುಹಿಸಿ.
ಅರ್ಜಿ ಸಲ್ಲಿಸುವ ವಿಳಾಸ : ಪ್ರಧಾನ ವ್ಯವಸ್ಥಾಪಕರು (ಆ ಮತ್ತು ಮಾ.ಸಂ.ಅ) ನಿಗಮ ಕಛೇರಿ ಗು.ವಿ.ಸ.ಕಂ.ನಿ., ಸ್ಟೇಷನ್ ರೋಡ್ ಕಲಬುರಗಿ, 585102
ಅರ್ಜಿ ಶುಲ್ಕ : ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಆಗಸ್ಟ್ 23, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 13, 2024
GESCOM Apprentice Recruitment 2024 : Important Links
Important Links
NOTIFICATION | CLICK HERE |
APPLICATION FORM | CLICK HERE |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ. |