KPTCL Recruitment 2024 : ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿ ಖಾಲಿ ಇರುವ ಕಿರಿಯ ಸ್ಟೇಷನ್ ಪರಿಚಾರಕ, ಕಿರಿಯ ಪವರ್‌ಮ್ಯಾನ್ ಹಾಗೂ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಖಾಲಿ ಇರುವ ಕಿರಿಯ ಪವರ್‌ಮ್ಯಾನ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
KPTCL Recruitment 2024 : Details of Vacancies
ಹುದ್ದೆ : ಕಿರಿಯ ಸ್ಟೇಷನ್ ಪರಿಚಾರಕ, ಕಿರಿಯ ಪವರ್‌ಮ್ಯಾನ್
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 2,975 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಹುದ್ದೆ | ಹುದ್ದೆಗಳ ಸಂಖ್ಯೆ |
ಕಿರಿಯ ಸ್ಟೇಷನ್ ಪರಿಚಾರಕ | 433 |
ಕಿರಿಯ ಪವರ್‌ಮ್ಯಾನ್ | 2542 |
ಶೈಕ್ಷಣಿಕ ಅರ್ಹತೆ :
ಎಸ್.ಎಸ್.ಎಲ್.ಸಿ. ಅಥವಾ 10ನೇ ತರಗತಿಯ (ಸಿ.ಬಿ.ಎಸ್.ಇ/ ಐ.ಸಿ.ಎಸ್.ಇ) ಪರೀಕ್ಷೆಯನ್ನು ಕರ್ನಾಟಕ ರಾಜ್ಯದ ವಿದ್ಯಾಸಂಸ್ಥೆಗಳಿಂದ ತೇರ್ಗಡೆ ಹೊಂದಿರುವಂತಹ ಅಭ್ಯರ್ಥಿಗಳು ಮಾತ್ರ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅರ್ಹರಾಗಿರುತ್ತಾರೆ.
ಉದ್ಯೋಗ ಮಾಹಿತಿ : ಜೆಸ್ಕಾಂ ನೇಮಕಾತಿ 2024 – GESCOM Apprentice Recruitment 2024 » Karnataka Job Info
ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಪ.ಜಾತಿ, ಪ.ಪಂ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
ವೇತನ : ಅಭ್ಯರ್ಥಿಗಳಿಗೆ 1ನೇ ವರ್ಷ ಮಾಸಿಕ ರೂ. 17,000, 2ನೇ ವರ್ಷ ಮಾಸಿಕ ರೂ. 19,000, 3ನೇ ವರ್ಷ ಮಾಸಿಕ ರೂ. 21,000 ರಂತೆ ಮೊದಲ ಮೂರು ವರ್ಷ ಸಂಭಾವನೆ ನೀಡಲಾಗುತ್ತದೆ. ಮೂರು ವರ್ಷದ ತರಬೇತಿಯನ್ನು ತೃಪ್ತಿಕರವಾಗಿ ಪೂರೈಸಿದ ನಂತರ ಅಭ್ಯರ್ಥಿಗಳಿಗೆ ಮಾಸಿಕ ರೂ. 28,550 ರಿಂದ ರೂ. 63,000 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ : ‘ಸಹನ ಶಕ್ತಿ ಪರೀಕ್ಷೆ’ಯ ಕನಿಷ್ಠ ಮೂರು ಸ್ಪರ್ಧೆಗಳಲ್ಲಿ ಅರ್ಹತೆ ಹೊಂದಿರುವಂತಹ ಅಭ್ಯರ್ಥಿಗಳನ್ನು, ಎಸ್.ಎಸ್.ಎಲ್.ಸಿ ಅಥವಾ 10ನೇ ತರಗತಿಯ ಪರೀಕ್ಷೆಯ ವಿದ್ಯಾರ್ಹತೆಯಲ್ಲಿ ಗಳಿಸಿರುವ ಶೇಕಡಾವಾರು ಅಂಕಗಳ ಜೇಷ್ಠತೆ ಆಧಾರದ ಮೇಲೆ ಕರ್ನಾಟಕ ಸರ್ಕಾರದಲ್ಲಿ ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಗಳನ್ನು ಪಾಲಿಸಿ, ಆಯ್ಕೆ ಮಾಡಲಾಗುವುದು.
ಸಹನ ಶಕ್ತಿ ಪರೀಕ್ಷೆ :
• ವಿದ್ಯುತ್ ಕಂಬ ಹತ್ತುವುದು – 8 ಮೀಟರ್ ಎತ್ತರ (ಕಡ್ಡಾಯ)
• 100 ಮೀಟರ್ ಓಟ – 14 ಸೆಕೆಂಡ್‌ಗಳು
• ಸ್ಕಿಪ್ಪಿಂಗ್ – ಒಂದು ನಿಮಿಷಕ್ಕೆ 50 ಬಾರಿ
• ಶಾಟ್‌ಫುಟ್ (12 ಪೌಂಡ್‌ಗಳು) – 8 ಮೀಟರ್ ಎಸೆತ (3 ಅವಕಾಶಗಳು)
• 800 ಮೀಟರ್ ಓಟ – 3 ನಿಮಿಷಗಳು
ಉದ್ಯೋಗ ಮಾಹಿತಿ : ಜೆಸ್ಕಾಂ ನೇಮಕಾತಿ 2024 – GESCOM Apprentice Recruitment 2024 » Karnataka Job Info
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ರೂ. 614
• ಪ್ರವರ್ಗ1, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 614
• ಪ.ಜಾತಿ, ಪರಿಶಿಷ್ಟ ವರ್ಗದ ಅಭ್ಯರ್ಥಿಗಳು – ರೂ. 378
• ವಿಕಲಚೇತನ ಅಭ್ಯರ್ಥಿಗಳು – ಶುಲ್ಕ ವಿನಾಯಿತಿ ಇದೆ.
ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಅಂಚೆ ಕಚೇರಿಗಳ ಮುಖಾಂತರ ಶುಲ್ಕ ಪಾವತಿಸಬೇಕು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಅಕ್ಟೋಬರ್ 21, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ನವೆಂಬರ್ 20, 2024
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ನವೆಂಬರ್ 25, 2024
KPTCL Recruitment 2024 Notification : Important Links
SHORT NOTIFICATION | CLICK HERE |
DETAILED NOTIFICATION – NKK | CLICK HERE |
DETAILED NOTIFICATION – KK | CLICK HERE |
APPLY ONLINE | CLICK HERE |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.
Super sir and other job notification bidi sir