New Ration Card: ಈ ದಿನದಂದು ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ.! ಇಲ್ಲಿದೆ ಇದರ ಸಂಪೂರ್ಣ ಮಾಹಿತಿ ನೋಡಿ!
New Ration Card Apply Karnataka: ನಮಸ್ಕಾರ ಎಲ್ಲ ಕನ್ನಡದ ಸಮಸ್ತ ಜನತೆಗೆ, ರಾಜ್ಯದಲ್ಲಿ ಅಥವಾ ಕೇಂದ್ರದಲ್ಲಿ ಯಾವುದಾದರೂ ಯೋಜನೆಗಳನ್ನ ಬಿಡುಗಡೆ ಮಾಡಿದರೆ, ಆ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ರೇಷನ್ ಕಾರ್ಡ್ ಬಹಳ ಮುಖ್ಯವಾಗಿದೆ ಮತ್ತು ಮನೆಗೆ ಉಚಿತವಾಗಿ ರೇಷನ್ ಪಡೆಯಲು ಸಹ ಮುಖ್ಯವಾಗಿದೆ. ಈ ಒಂದು ರೇಷನ್ ಕಾರ್ಡಗೆ ಹಲವಾರು ಜನರು ಅರ್ಜಿ ಸಲ್ಲಿಸಲು ಕಾದು ಕುಳಿತಿದ್ದಾರೆ. ಅಂತವರಿಗಾಗಿ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ ಮತ್ತು ಅರ್ಜಿ ಸಲ್ಲಿಸಲು ಯಾವೆಲ್ಲ ದಾಖಲಾತಿಗಳು ಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ಕೆಳಗಡೆ ನೀಡಲಾಗಿದೆ ಆದ್ದರಿಂದ ಸಂಪೂರ್ಣ ಓದಿ.
ಹೊಸ ರೇಷನ್ ಕಾರ್ಡ್ ವಿತರಣೆ ಯಾವಾಗ:
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕೃತ ಮಾಹಿತಿ ಪ್ರಕಾರ 2,90,000 ಹೊಸ ರೇಷನ್ ಕಾರ್ಡ್ ಅರ್ಜಿ ಸ್ವೀಕಾರ ಆಗಿದ್ದು, ಇವುಗಳನ್ನು ಇಲಾಖೆ ಪರಿಶೀಲಿಸಿ ಮುಂದಿನ ಸೆಪ್ಟಂಬರ್ ತಿಂಗಳಿನಲ್ಲಿ ವಿತರಣೆ ಮಾಡಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವರಾದ ಕೆಎಚ್ ಮುನಿಯಪ್ಪನವರು ತಿಳಿಸಿದ್ದಾರೆ.
ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ ದಿನಾಂಕ:
ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಕಾದು ಕುಳಿತ ರಾಜ್ಯದ ಜನತೆಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವರಾದ ಕೆಎಚ್ ಮುನಿಯಪ್ಪನವರು ಸಿಹಿ ಸುದ್ದಿಯನ್ನು ನೀಡಿದ್ದಾರೆ. ಹಿಂದಿನ ದಿನಗಳಲ್ಲಿ ಅರ್ಜಿ ಸ್ವೀಕಾರ ಆದ ಹೊಸ ರೇಷನ್ ಕಾರ್ಡ್ ಗಳನ್ನು ಪರಿಶೀಲಿಸಿ, ವಿತರಣೆ ಮಾಡಿದ ನಂತರ ಮುಂದಿನ ತಿಂಗಳಿನ ಸೆಪ್ಟಂಬರ್ ನಲ್ಲಿ 15ನೇ ತಾರೀಕಿನ ನಂತರ ಹೊಸ ರೇಷನ್ ಕಾರ್ಡಗೆ ಅರ್ಜಿಯನ್ನು ಕರೆಯಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.
New Ration Card ಬೇಕಾಗುವ ದಾಖಲೆಗಳು:
- ಎಲ್ಲ ಸದಸ್ಯರ ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಜನನ ಪ್ರಮಾಣ ಪತ್ರ (ಕುಟುಂಬದಲ್ಲಿ 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಗುವಿದ್ದರೆ ಮಾತ್ರ)
- ಸದಸ್ಯರ ಫೋಟೋ
- ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ (ಕಡ್ಡಾಯವಾಗಿ ಆಧಾರ್ ಕಾರ್ಡ್ ಲಿಂಕ್ ಆಗಿರಬೇಕು)
ಈ ಮೇಲೆ ನೀಡಿರುವ ದಾಖಲೆಗಳೊಂದಿಗೆ ನಿಮ್ಮ ಹತ್ತಿರದ ಸೇವಾಕೇಂದ್ರಕ್ಕೆ ಭೇಟಿ ನೀಡುವ ಮೂಲಕ ಇನ್ನು ಹೆಚ್ಚಿನ ಮಾಹಿತಿಯನ್ನು ಪಡೆದುಕೊಂಡು ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭವಾದಾಗ ಕೂಡಲೇ ಅರ್ಜಿ ಸಲ್ಲಿಸಿ.